ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.

ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ’ ಎಂದು ಖಾಸಗಿ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿರುವ 43 ವರ್ಷದ ವಿಚ್ಛೇದಿತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

7-8 ತಿಂಗಳಿಂದ ಮಹಿಳೆ ಜೊತೆ ನಿರಂತರ ಸಂಪರ್ಕದಲ್ಲಿದ್ದ ಶರತ್, ಸಂತ್ರಸ್ತ ಮಹಿಳೆಯು ಮದುವೆಯಾಗು ಎಂದು ಒತ್ತಾಯಿಸಿದರೆನ್ನಲಾಗಿದೆ. ಈ ವೇಳೆ ಶರತ್, ‘ನನಗೆ ಹಣಕಾಸಿನ ಸಮಸ್ಯೆ ಇದೆ. ಅದು ಬಗೆಹರಿದ ನಂತರ ಮದುವೆಯಾಗುತ್ತೇನೆ’ ಎಂದು ಭರವಸೆ ನೀಡಿದ್ದನು. ಅಲ್ಲದೆ, ಈಗ ನನಗೆ ಸಹಾಯ ಮಾಡು ಎಂದು ಕೇಳಿದ್ದ. ಈ ವೇಳೆ ಮಹಿಳೆಯು ಹಲವು ಬಾರಿ ಹಣ ನೀಡಿದ್ದು, ಒಟ್ಟು ನಾಲ್ಕು ಲಕ್ಷ ಹಣವನ್ನು ಶರತ್‌ಗೆ ನೀಡಿದ್ದರು. ನಂತರ ಮಹಿಳೆ ಮದುವೆಗೆ ಒತ್ತಾಯಿಸಿದಾಗ ಶರತ್ ಆಕೆಯ ಮನೆ ಕಡೆ ಹೋಗುವುದನ್ನು ನಿಲ್ಲಿಸಿದ್ದಲ್ಲದೆ, ಫೋನ್ ಸಂಪರ್ಕವನ್ನೂ ಕಡಿದುಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕೇಳಲು ಮಹಿಳೆ ಗುಂಡಪ್ಪ ಶೆಡ್ಡಿನಲ್ಲಿರುವ ಶರತ್ ಕಲ್ಯಾಣಿಯ ಮನೆಗೆ ಹೋದಾಗ ಆತನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇನ್ನೊಮ್ಮೆ ನಮ್ಮ ಮನೆ ಬಳಿ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿ ಹಣ ಪಡೆದು ಶರತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತೆ ಮಹಿಳೆಯು ಜುಲೈ 26ರಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

2 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

17 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

19 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

20 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago