ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು
ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.
ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.
ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು.
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ಡಿಢೀರ್ ದಾಳಿ ನಡೆಸಿದ್ದು, ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹನುಮಂತಪ್ಪ ಅವರಿಗೆ ಪತ್ನಿ, ನಾಲ್ವರು ಮಕ್ಕಳಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…