POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

GridArt 20240826 090050923.jpg

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(soraba) ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ.

ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್ ನಿಂದ ವಿದ್ಯುತ್ ಪ್ರವಹಿಸಿ ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.