ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ
ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು.
ದೂರಿನ ತನಿಖೆ ನಡೆಸಿದ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀಪತಿ ಆರ್.ಎಲ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಆರೋಪ ದೃಢಪಟ್ಟ ಹಿನ್ನೆಲೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮೋಹನ್.ಜೆ.ಎಸ್ 20 ವರ್ಷ ಕಠಿಣ ಶಿಕ್ಷೆ, 2.10 ಲಕ್ಷ ರೂ. ದಂಡ ಅಥವಾ ದಂಡ ಕಟ್ಟಲು ವಿಫಲವಾದರೆ ಒಂದು ವರ್ಷ ಹೆಚ್ಚುವರಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರಿ ಅಭಿಯೋಜಕರಾಗಿ ಶ್ರೀಧರ್.ಎಚ್.ಆರ್ ವಾದ ಮಂಡಿಸಿದ್ದರು.