ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ.
ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ.
ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿರಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.