POSTMANNEWS

ನೈಜ ಸುದ್ದಿ ನೇರ ಬಿತ್ತರ..

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ..

ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ..

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು ಉಪನ್ಯಾಸಕ ಪುನೀತ್‌ ವಿರುದ್ಧ ಇಂತಹ ಆರೋಪ ಕೇಳಿಬಂದಿದೆ.. ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ..

ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.. ತನಗೆ ಮದುವೆಯಾಗುವುದಾಗಿ ಉಪನ್ಯಾಸಕ ಪುನೀತ್‌ ನಂಬಿಸಿದ್ದ.. ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ.. ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ.. ಈಗ ಮದುವೆಗೆ ಒಲ್ಲೆ ಎನ್ನುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪ ಮಾಡಿದ್ದಾಳೆ..

About The Author

Leave a Reply

Your email address will not be published. Required fields are marked *