ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?
ರಿಪ್ಪನ್‌ಪೇಟೆ : ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಹೌದು ಶುಕ್ರವಾರ ರಾತ್ರಿ ಪಟ್ಟಣದ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು ನಗುಮಗು ಆಂಬುಲೆನ್ಸ್ ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗುತಿತ್ತು ಆದರೆ ಆಂಬುಲೆನ್ಸ್ ಚಾಲಕ ಬಾಲಚಂದ್ರ ಎಂಬಾತನು ಪಾನಮತ್ತನಾಗಿ ವಾಹನ ಚಲಾಯಿಸಿದ್ದರಿಂದ ದೂನ ಸಮೀಪದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಹಿಂಬದಿಯಿಂದ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ತಾಯಿ ಮತ್ತು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಇದೇ ಸಮಯಕ್ಕೆ ಸರಿಯಾಗಿ ಮತ್ತೊಂದು 108 ಆಂಬುಲೆನ್ಸ್ ಈ ಮಾರ್ಗವಾಗಿ ಬಂದಿದ್ದು ಗಾಯಾಳುಗಳನ್ನು 108 ಆಂಬುಲೆನ್ಸ್ ಗೆ ಶಿಫ್ಟ್ ಮಾಡಲು ಹೊರಟಾಗ ಕುಟುಂಬಸ್ಥರು ‘ಆಂಬುಲೆನ್ಸ್ ಸಹವಾಸವೇ ಬೇಡ’ ಎಂದು ಖಾಸಗಿ ಕಾರಿನಲ್ಲಿ ತಾಯಿ ಮಗುವನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಿದ್ದಾರೆ.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಪಾನಮತ್ತ ಚಾಲಕನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಸವ ವೇದನೆ ಅನುಭವಿಸುವವರನ್ನು ಸರಕಾರಿ ಆಸ್ಪತ್ರೆಗಳಿಗೆ ಕರೆತಂದರೆ, ಹೆರಿಗೆ ನಂತರ ಬಾಣಂತಿ ಮತ್ತು ಮಗುವನ್ನು ಸುರಕ್ಷಿತವಾಗಿ ಮನೆ ತಲುಪಿಸಲು ರಾಜ್ಯ ಸರಕಾರ, ‘ನಗು ಮಗು ಆಂಬ್ಯುಲನ್ಸ್’ ಸೇವೆ ಜಾರಿಗೆ ತಂದಿದ್ದು ಆದರೆ ಆಂಬುಲೆನ್ಸ್ ಚಾಲಕನೇ ಪಾನಮತ್ತನಾಗಿ ಮಗುವಿನ ನಗು ಕಸಿದು ಉಸಿರು ತೆಗೆಯಲು ಹೊರಟರೇ ಬಾಣಂತಿ, ಮಗುವಿನ ಪಾಡನ್ನು ಕೇಳೋರ್ಯಾರು..!!?
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…