ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!
ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.
ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು, ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…