ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು.

ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ. ತಮ್ಮ 5 ದಶಕಗಳ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಇಲ್ಲ ಎಂದು ಹೇಳುತ್ತಿದ್ದರು. ಈಗ ತನಿಖೆ ಎದುರಿಸುವುದು ಅನಿವಾರ್ಯವಾಗಿದೆ. ತನಿಖೆ ನಡೆಸುವುದನ್ನೇ ತಡೆಯಲು ಹೊರಟಿದ್ದ ಸಿದ್ದರಾಮಯ್ಯ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ತಮ್ಮ ವರಸೆ ಬದಲಿಸಿದ್ದು, ಯಾವುದೇ ತನಿಖೆಗೆ ಸಿದ್ದ ಎಂದಿದ್ದಾರೆ. ಆದರೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡೇ ತನಿಖೆ ಎದುರಿಸುವುದು ಸರಿಯಲ್ಲ ಎಂದರು.

ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿರುವುದು ದುರದೃಷ್ಠಕರ. ಒಂದುರಾಷ್ಟ್ರೀಯ ಪಕ್ಷವಾಗಿದ್ದು, ಭ್ರಷ್ಠಾಚಾರಆರೋಪ ಕೇಳಿಬಂದಾಗಲೂ ಆಪಾದನೆಗೆ ಒಳಗಾದವರ ಬೆಂಬಲಕ್ಕೆ ನಿಂತಿರುವುದು ಪಕ್ಷದ ನಿಲುವನ್ನು ತೋರಿಸುತ್ತಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿ, ತನಿಖೆ ಎದುರಿಸಲಿ. ತನಿಖೆ ಬಳಿಕ ಅವರು ‘ಶುದ್ಧರಾಮಯ್ಯ’ ಎಂದು ಸಾಬೀತಾದಲ್ಲಿ ಮತ್ತೆ ಮುಖ್ಯಮಂತ್ರಿಯಾದಲ್ಲಿ ತಮಗೇನೂ ಅಭ್ಯಂತರವಿಲ್ಲ ಎಂದರು.

ಶಿವಮೊಗ್ಗದ ಎಪಿಎಂಸಿ ಪ್ರಾಂಗಣದಲ್ಲಿಯೇ ಅಡಿಕೆಗೆ ಬಣ್ಣ ಹಾಕುವ ವಿಷಯದ ಕುರಿತು ಪತ್ರಿಕೆಯಲ್ಲಿ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಅಡಿಕೆಗೆ ಕೃತಕ ಬಣ್ಣ ಮತ್ತಿತರರ ರಾಸಾಯನಿಕಗಳನ್ನು ಬಳಸಿ ಕಲಬೆರಕೆ ಮಾಡುತ್ತಿರುವುದು ಅಡಿಕೆ ದರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅಡಿಕೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳಿವೆ ಎಂಬ ಕುರಿತು ಒಂದೆಡೆ ತನಿಖೆ ನಡೆಯುತ್ತಿದೆ. ಇಂತಹ ಕಲಬೆರಕೆ ಅಡಿಕೆಯನ್ನೇ ಮಾದರಿಯಾಗಿ ತೆಗೆದುಕೊಂಡು ತನಿಖೆ ನಡೆಸಿದರೆ, ಬೆಳೆಗಾರರ ಹಿತಕ್ಕೆ ವ್ಯತಿರಿಕ್ತ ಫಲಿತಾಂಶ ಬರುವ ಸಾಧ್ಯತೆಯಿದೆ ಎಂದ ಅವರು, ಜಿಲ್ಲಾಧಿಕಾರಿಗಳ ಜೊತೆ ಈಗಾಗಲೇ ಚರ್ಚೆ ನಡೆಸಿದ್ದು, ಅಡಿಕೆಗೆ ಕೃತಕಬಣ್ಣ ಹಾಕುವ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದೇನೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಮಣ್ಯ, ಪ್ರಮುಖರಾದ ಬೆಳೆಗೋಡು ಗಣಪತಿ, ಎನ್.ಆರ್. ದೇವಾನಂದ, ಎ.ವಿ.ಮಲ್ಲಿಕಾರ್ಜುನ, ಉಮೇಶ ಕಂಚುಗಾರ್, ಎಚ್.ಎನ್.ಶ್ರೀಪತಿ, ಸುರೇಶ್ ಸ್ವಾಮಿರಾವ್, ಹಾಲಗದ್ದೆ ಉಮೇಶ್, ಮಂಜುನಾಥ್ ಸಂಜೀವ, ಸತ್ಯನಾರಾಯಣ ವಿ, ನಗರ ನಿತೀನ್, ಮಂಡಾನಿ ಮೋಹನ್, ಚಾಲುಕ್ಯ ಬಸವರಾಜ್, ಕೋಣೆಮನೆ ಶಿವಕುಮಾರ್, ಮನೋಜ್ ಪೂಜಾರಿ, ಬ್ರಹ್ಮೇಶ್ವರ ಅಭಿಷೇಕ್, ಕೃಷ್ಣವೇಣಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

10 hours ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

17 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

1 day ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

1 day ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

1 day ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

1 day ago