ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಅಭಿಯಾನ
ರಿಪ್ಪನ್‌ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಯುವಜನತೆಯ ಜಾಲತಾಣವಾದ My Bharath ಉಪಕ್ರಮದ ಸ್ವಚ್ಚತೆಯೇ ಸೇವೆ ಅಭಿಯಾನದ ಅಡಿಯಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಜಾಥಾ ಮತ್ತು ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸುವ ಅಭಿಯಾನವನ್ನು ಆಯೋಜಿಸಲಾಗಿತ್ತು.
ಈ ಜಾಥಾಕ್ಕೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ರವರು ಚಾಲನೆ ನೀಡಿದರು.
ಕಾಲೇಜಿನ ಮುಂಭಾಗದಿಂದ ಆರಂಭಗೊಂಡ ಜಾಥಾ ಪಟ್ಟಣದ ವಿನಾಯಕ ವೃತ್ತದ ವರೆಗೆ ಸಾಗಿ, ಮರಳಿ ಕಾಲೇಜಿನ ಮುಂಭಾಗದ ವರೆಗೆ ಸಾಗಿತು ಸುಮಾರು 400 kg ಯಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಗ್ರಾಮ ಪಂಚಾಯಿತಿಯ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಹಸ್ತಾಂತರಿಸಲಾಯಿತು.ಈ ಜಾಥಾದಲ್ಲಿ ಸುಮಾರು 100 ಕ್ಕೂ ಹೆಚ್ಚು ಜನ ಸ್ವಯಂ ಸೇವಕರು ಭಾಗವಹಿಸಿದ್ದರು.
ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್. ಎಸ್. ವಿರುಪಾಕ್ಷಪ್ಪ , ಕಾಲೇಜು ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷರಾದ ಹಾಲಸ್ವಾಮಿ ಗೌಡ್ರು, ಗ್ರಾಮ ಪಂಚಾಯಿತಿಯ ಸದಸ್ಯರಾದ ಸುಂದರೇಶ್, ಮಧುಸೂಧನ್, ಮಂಜುಳಾ ಕೇತಾರ್ಜಿ ರಾವ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಧುಸೂಧನ್, NSS ಅಧಿಕಾರಿ ದೇವರಾಜ್ ಆರ್ ಹಾಗೂ ಇನ್ನಿತರರಿದ್ದರು.