ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ ಎಚ್ಚರಿಸಿದರು‌.

ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೊಸನಗರ ತಾಲ್ಲೂಕಿನಾದ್ಯಂತ ಸೆ. 07 ರಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಹಾಗೂ ಸೆ.16 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು ಈ ಸಂಬಂಧ ಹೊಸನಗರ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸೌಹಾರ್ದತೆ ಮತ್ತು ಶಾಂತಿ ಹಾಗು ಸಾರ್ವಜನಿಕ ಹಿತದೃಷ್ಟಿಯಿಂದ ಸೆ. 07 ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಸೆ.16 ರಂದು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜಿ ಸಿಸ್ಟಂ ಹಾಗೂ ಬೈಕ್ ರ‍್ಯಾಲಿಗಳನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದು ಜಿಲ್ಲಾಧಿಕಾರಿಗಳ ಮುಂದಿನ ಅದೇಶ ಬರುವವರೆಗೆ ಇವೆರಡೂ ನಿಷೇಧಿಸಲ್ಪಟ್ಟಿರುತ್ತದೆ ಎಂದರು.

ಹೊಸನಗರ ತಾಲ್ಲೂಕಿನ ಜನರು ಶಾಂತಿ ಪ್ರಿಯರಾಗಿದ್ದು ಹಿಂದು-ಮುಸ್ಲಿಂ-ಕ್ರೈಸ್ತರು ಅಣ್ಣ ತಮ್ಮದಿರಂತೆ ಇಲ್ಲಿಯವರೆಗೆ ಹೊಂದಿಕೊಂಡು ಹೋಗುತ್ತಿದ್ದು ಮುಂದಿನ ದಿನಗಳಲ್ಲಿಯೂ ಯಾವುದೇ ಚ್ಯುತಿ ಬಾರದಂತೆ ಕಾಪಾಡಿಕೊಂಡು ಹೋಗಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಕಿವಿಗೊಡಬಾರದು. ತಾಲ್ಲೂಕಿನಲ್ಲಿ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಕರೆ ನೀಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago