RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ
ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ.
ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ ವತಿಯಿಂದ ಗವಟೂರಿನಲ್ಲಿ ಹಿಂದೂ ಮಹಾಸಭಾ ಮೆರವಣಿಗೆಯಲ್ಲಿ ತೊಡಗಿದ್ದ ಹಿಂದೂ ಕಾರ್ಯಕರ್ತರಿಗೆ ತಂಪು ಪಾನೀಯ ಹಾಗೂ ಸಿಹಿ ತಿಂಡಿಗಳನ್ನು ಹಂಚಿ ಗಣಪತಿ ಹಬ್ಬದ ಶುಭಾಶಯ ಕೋರಿದ್ದಾರೆ.
ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ 57ನೇ ವರ್ಷದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮೂಲಕ ಮಂಗಳವಾರ ಸಂಜೆ ಮೆರವಣಿಗೆ ಹೊರಟು ನಾಲ್ಕು ಪ್ರಮುಖ ರಸ್ತೆಗಳಲ್ಲಿ ರಾಜಬೀದಿ ಉತ್ಸವ ನಡೆಸಿ ಬುಧವಾರ ಬೆಳಿಗ್ಗೆ ಹೊಸನಗರ ರಸ್ತೆಯ ತಾವರೆಕೆರೆಯಲ್ಲಿ ಗಣಪತಿ ವಿಸರ್ಜನೆ ನಡೆಯಿತು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಆಸೀಫ಼್ ಭಾಷಾ,ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ,ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ ಬ್ಯಾರಿ , ಸಿಪಿಐ ಗುರಣ್ಣ ಹೆಬ್ಬಾಳ್ , ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಇನ್ನಿತರರಿದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…