Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ.

ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು.

ಈ ಹಿನ್ನಲೆಯಲ್ಲಿ ಶಾಸಕರು ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸುವ ಭರವಸೆ ನೀಡಿ ಸ್ಥಳದಲ್ಲಿಯೇ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.

ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ , ಕೆಡಿಪಿ ಸದಸ್ಯರಾದ ಚಂದ್ರೇಶ್ , ಆಸೀಫ಼್ ಭಾಷಾ ಮುಖಂಡರಾದ ಗಣಪತಿ ಗವಟೂರು , ರವೀಂದ್ರ ಕೆರೆಹಳ್ಳಿ , ಉಮಾಕರ್ ಕಾನುಗೋಡು ,ಸಾರಾಭಿ ಹೈದರ್ , ಉಲ್ಲಾಸ್ ತೆಂಕೋಲ್ , ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ,ಜಿ ಡಿ ಮಲ್ಲಿಕಾರ್ಜುನ್ , ವಿಜಯ್ , ಮಹೇಂದ್ರ ಬುಕ್ಕಿವರೆ ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

20 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

20 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago