SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ.

ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ, ಎ.ಎ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

• ಬೆಂಗಳೂರು ಭದ್ರಾವತಿ, ಎನ್‌ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಮತ್ತು ಸಿಟಿ ಬಸ್‌ಗಳು, ಕಾರುಗಳು ಎಂ.ಆರ್.ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‌ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರವಾಗಿ ಸವಳಂಗ ರಸ್ತೆಗೆ ಹೋಗುವುದು.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.

ಶಿಕಾರಿಪುರ, ಸೊರಬ, ಅನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್, ಲಕ್ಷಿö್ಮ ಟಾಕೀಸ್ ಸರ್ಕಲ್, ಪೋಲಿಸ್ ಚೌಕಿ, ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.

ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ :

ಕೋಟೆ ರಸ್ತೆ, ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣೆಗೆಯ ಮಾರ್ಗವಾದ ಭೀಮೇಶ್ವರ ದೇವಸ್ಥಾನದಿಂದ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ, ಎ.ಎ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಮಹಾವೀರ್ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ, ಭೀಮೇಶ್ವರ ದೇವಸ್ಥಾನವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago