HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ..
ಹೊಸನಗರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಹಾಗೂ ಮಾಜಿ ಕಾರ್ಯದರ್ಶಿ ಹೆಚ್ ಆರ್ ಪ್ರಕಾಶ್ ಇಂದು ಅವರ ಸ್ವಗೃಹ ದಲ್ಲಿ ನಿಧನರಾದರು.
ಪಟ್ಟಣದ ಹಳೆ ಸಾಗರ ರಸ್ತೆಯ ದಿವಂಗತ ಸೋಡಾ ರಾಜಪ್ಪನವರ ಪುತ್ರರಾದ ಎಚ್ ಆರ್ ಪ್ರಕಾಶ್ ಅವರು ಇಂದು ಮಧ್ಯಾಹ್ನ 1:30 ಸಮಯದಲ್ಲಿ ತಮ್ಮ 63 ರ ಹರೆಯದಲ್ಲಿ ಅವರ ಸ್ವಗೃಹದಲ್ಲಿ ತೀವ್ರ ಹೃದಯಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದರು.
ಅವಿವಾಹಿತರಾಗಿದ್ದ ಅವರು ಪಟ್ಟಣದ ಶ್ರೀ ವಿದ್ಯಾಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಅವಿರತ ಸೇವೆ ಸಲ್ಲಿಸಿದ್ದರು. ಅಪಾರ ಪ್ರತಿಭಾವಂತರಾಗಿದ್ದ ಪ್ರಕಾಶ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿ ಗಳು ಅವರ ನಿವಾಸಕ್ಕೆ ತೆರಳಿ ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ. ಹಾಗೂ ಡಾ. ಮಾರ್ಷಲ್ ಶಾರಾಮ್ . ಕೆ.ಜಿ ನಾಗೇಶ್ ಮತ್ತು ಕ.ಸಾ.ಪ. ಸದಸ್ಯರುಗಳು ಮೃತರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು. ಮೃತರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…