ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ(ಇಂಟೆಲಿಜೆನ್ಸ್ ರಿಪೋರ್ಟ್) ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಮಕ್ಕಳ ದಿನಾಚರಣೆ -2024 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು ದಿ: 24-09-2024 ರೊಳಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…