KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ
ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಡೆದಿದ್ದೇನು ..???
ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಸಬೀತಾ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಹಲ್ಲೆಯಿಂದ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಸಬೀತಾ ರವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿತ್ತು…
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ರಿಪ್ಪನ್‌ಪೇಟೆ ಪೊಲೀಸರು ಆರೋಪಿ ಸದಾನಂದ ಭಟ್ ಶೋಧ ನಡೆಸಿದ್ದಾರೆ ಆದರೆ ಆರೋಪಿಯ ಕಾರು ಪಟಗುಪ್ಪ ಸೇತುವೆ ಬಳಿ ದೊರಕಿದ್ದು ಯಾವುದೇ ಸುಳಿವು ಸಿಕ್ಕಿರಲಿಲ್ಲ ನಂತರ ಕಾರನ್ನು ಹೊಸನಗರ ಪೊಲೀಸರು ವಶಪಡಿಸಿಕೊಂಡಿದ್ದರು…
ಶುಕ್ರವಾರ ಬೆಳಿಗ್ಗೆ ಆರೋಪಿ ಸದಾನಂದ ಭಟ್ ಮೃತ ದೇಹ ಪಟಗುಪ್ಪ ಸೇತುವೆ ಬಳಿಯಲ್ಲಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಹಾಗೂ ಹೊಸನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…