ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು
ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು.
ಶಾಲಾ ಮಕ್ಕಳ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕ ವರ್ಗ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಮಕ್ಕಳನ್ನು ಗೌರವಿಸಿದರು.