ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್
ಹುಂಚ : ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೇಳಿದರು.
ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದಡಿ ಹುಂಚಾ ಗ್ರಾಪಂ ವತಿಯಿಂದ ಹೊಂಬುಜ ಜೈನ ಮಠ , ಪದ್ಮಾಂಬಾ ಪ್ರೌಡ ಶಾಲೆ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಪ್ರತಿಯೊಬ್ಬರು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಇಡೀ ನಗರ ಸ್ವಚ್ಛವಾಗುತ್ತದೆ. ಈ ಮೂಲಕ ಇಡೀ ಜಿಲ್ಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗಲಿದೆ ಎಂದರು.
ವಿದ್ಯಾರ್ಥಿಗಳು ತಾವು ಬಳಸುವ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ತಮ್ಮ ಮನೆ, ಶಾಲೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಿರದೇ ಇದನ್ನು ದಿನನಿತ್ಯ ಹಾಗೂ ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ , ತಾಪಂ NREG ರಾಜೇಂದ್ರ , ಅಧಿಕಾರಿ ಗ್ರಾಪಂ ಸದಸ್ಯರಾದ ದೇವೇಂದ್ರ ಹುಂಚ , ಪಿಡಿಓ ರಮೇಶ್ ,ಸ್ವಸಹಾಯ ಸಂಘದ ಸದಸ್ಯರು , ಗ್ರಾಪಂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.ಗ್ರಾಪಂ