ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ
ಗ್ರಾಮೀಣ ಭಾಗದ ಜನತೆಗೆ ಗ್ರಾಪಂ ಕಟ್ಟಡವೇ ವಿಧಾನ ಸೌಧ – ಆರಗ ಜ್ಞಾನೇಂದ್ರ
ರಿಪ್ಪನ್‌ಪೇಟೆ : ಸರಕಾರಿ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಹೆದ್ದಾರಿಪುರ ಗ್ರಾಮ ಪಂಚಾಯತ್ ಕಛೇರಿಯ ಮೊದಲನೆ ಮಹಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪಾತ್ರ ಬಹಳ ಮಹತ್ವದಾಗಿದೆ. ಜನ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಅರಿತು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜನರಿಂದ ಆಯ್ಕೆಯಾದ ಪ್ರತಿಯೊಬ್ಬ ಜನಪ್ರತಿನಿಧಿಯು ಜನರಿಗೆ ಅಗತ್ಯವಾದ ಮೂಲ ಸೌಕರ್ಯವನ್ನು ಕಲ್ಪಿಸಿ ಜನಸೇವೆ ಮಾಡುವ ಮೂಲಕ ಜನರ ಋಣ ತೀರಿಸಬೇಕು.ನಮ್ಮ ಸರಕಾರ ಜನರಿಗೆ ನೀಡಿದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ ಎಂದರು.
ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ ಗ್ರಾಮೀಣ ಭಾಗದ ಜನತೆಗೆ ಸ್ಥಳೀಯ ಗ್ರಾಮ ಪಂಚಾಯತ್ ವಿಧಾನಸೌಧ ಇದ್ದ ಹಾಗೇ ಇಂತಹ ಕಟ್ಟಡವನ್ನು ಗ್ರಾಮ ಪಂಚಾಯತ್ ಸದಸ್ಯರು ತಮ್ಮ ಅನುದಾನವನ್ನು ಬಳಸಿ ಕಟ್ಟಿರುವುದು ಶ್ಲಾಘನೀಯವಾಗಿದೆ ಎಂದರು.
ನರೇಗ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಜೀವನದ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಲು ಸಹಕಾರಿಯಾಗಿದ್ದು ಅಲ್ಲಿನ ಅಲ್ಪಸ್ವಲ್ಪ ಲೋಪ ದೋಷದಿಂದ ಈಗ ಈ ಯೋಜನೆ ಗಾಜಿನೊಳಗಿನ ಗಂಟಿನಂತಾಗಿದೆ ಎಂದರು.
ಇದೇ ಸಂಧರ್ಭದಲ್ಲಿ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಕ್ರೀಡೆ, ಸಾಂಸ್ಕೃತಿಕ , ಯೋಗ , ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭೆಯ ಅಧಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ವಿನಂತಿ ರಾಘವೇಂದ್ರ ವಹಿಸಿದ್ದರು.
ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ವನಿತಾ ಗಂಗಾಧರ್, ಸದಸ್ಯರಾದ ಪ್ರವೀಣ್ ಸುಳುಗೋಡು , ವೈ ಟಿ ಷಣ್ಮುಖ , ಚಂದ್ರಶೇಖರ್ ಮಳವಳ್ಳಿ , ನಸೀಮಾ ರಫ಼ಿ , ವಿಶುಕುಮಾರ್ , ಶೇಖರಪ್ಪ , ಲಿಂಗರಾಜ್ ಹಾಗೂ ಇನ್ನಿತರರಿದ್ದರು.