POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

GridArt 20240925 144849022.jpg

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

ರಿಪ್ಪನ್‌ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ.

ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ನ ಮಾಜಿ ನಿರ್ದೇಶಕರು ಹಾಗೂ ಜನತಾದಳ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರ ನಿಧನರಾಗಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು , ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.