ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ ಪಾರ್ವತಮ್ಮ ಎಂಬುವವರು ಮೃತಪಟ್ಟಿದ್ದರು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಮೃತ ವೃದ್ದೆಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ವಿದ್ಯುತ್ ಅವಘಡಕ್ಕೆ ಕಾರಣರಾದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಪಿಎಸ್‌ಐ ಪ್ರವೀಣ್ ರವರಿಗೆ ಸೂಚಿಸಿದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ , ಕೆಡಿಪಿ ಸದಸ್ಯರಾದ ಚಂದ್ರೇಶ್ , ಆಸೀಫ಼್ ಭಾಷಾ ಮುಖಂಡರಾದ ಗಣಪತಿ ಗವಟೂರು , ರವೀಂದ್ರ ಕೆರೆಹಳ್ಳಿ , ಉಮಾಕರ್ ಕಾನುಗೋಡು ,ಸಾರಾಭಿ ಹೈದರ್ , ಉಲ್ಲಾಸ್ ತೆಂಕೋಲ್ , ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು , ಹಾಗೂ ಇನ್ನಿತರರಿದ್ದರು.