
ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…