ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು !
ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ.
ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ ವಾಕ್ ಮಾಡುತ್ತಿದ್ದ ಅಶೋಕನಗರದ ಮೋಹನ್ ಎಂಬುವರು ಹೃದಯಘಾತದ ಲಕ್ಷಣ ಕಂಡು ಬಂದಿರುವುದರಿಂದ ಸ್ಥಳದಲ್ಲೆ ಪ್ರಥಮ ಚಿಕಿತ್ಸೆ ನೀಡಿ 5 ನಿಮಿಷದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲೆ ಮರಣ ಹೊಂದಿರುವುದಾಗಿ ವೈದ್ಯರು ದೃಢಪಡಿಸಿದರು.
ವಿದ್ಯಾರ್ಥಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…