w
Headlines
Home » ಪಿಯು ಕಾಲೇಜಿನ ಕೆ ಹೆಚ್ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ

ಪಿಯು ಕಾಲೇಜಿನ ಕೆ ಹೆಚ್ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ

GridArt 20240904 174926166.jpg

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ‌ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಕೆ ಹೆಚ್ ವಾಸುದೇವ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೆ.05 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ.

ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳ 08 ಉಪನ್ಯಾಸಕರನ್ನು ಆಯ್ಕೆ ಮಾಡಲಾಗಿದೆ.

ಕೆ ಹೆಚ್ ವಾಸುದೇವ್ ಮೂಲತಃ ಸಾಗರದವರಾಗಿದ್ದು ಕನ್ನಡ ನಾಡಿನ ಪ್ರಖ್ಯಾತ ಜಾನಪದ ವಿದ್ವಾಂಸ ಹುಚ್ಚಪ್ಪ ಮಾಸ್ತರ್ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೌರಮ್ಮ ರವರ ಪುತ್ರರಾಗಿದ್ದಾರೆ.

ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪ್ರಶ್ನೆ ಪತ್ರಿಕೆ ಹಾಗೂ ಪ್ರಶ್ನೆ ಕೋಠಿಯನ್ನು ರಚಿಸುವ ತಂಡದ ಪ್ರಮುಖರಾಗಿರುವ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಲಭಿಸಿದೆ. ವಾಸುದೇವ್ ರವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.