ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಕೆ ಹೆಚ್ ವಾಸುದೇವ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸೆ.05 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ.
ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳ 08 ಉಪನ್ಯಾಸಕರನ್ನು ಆಯ್ಕೆ ಮಾಡಲಾಗಿದೆ.
ಕೆ ಹೆಚ್ ವಾಸುದೇವ್ ಮೂಲತಃ ಸಾಗರದವರಾಗಿದ್ದು ಕನ್ನಡ ನಾಡಿನ ಪ್ರಖ್ಯಾತ ಜಾನಪದ ವಿದ್ವಾಂಸ ಹುಚ್ಚಪ್ಪ ಮಾಸ್ತರ್ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೌರಮ್ಮ ರವರ ಪುತ್ರರಾಗಿದ್ದಾರೆ.
ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪ್ರಶ್ನೆ ಪತ್ರಿಕೆ ಹಾಗೂ ಪ್ರಶ್ನೆ ಕೋಠಿಯನ್ನು ರಚಿಸುವ ತಂಡದ ಪ್ರಮುಖರಾಗಿರುವ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಲಭಿಸಿದೆ. ವಾಸುದೇವ್ ರವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ.
ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…
ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr.…
ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು Shivamogga…
ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…
ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…
ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…