ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ.  ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ.  ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. 

ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ ಅರುಣ್ ಕುಮಾರ್,  ಸರಸ್ವತಿ ಪ್ರೇಮ್ ಚಂದ್ರ,  ಅಶ್ವಿನಿ ರವಿಶಂಕರ್, ಉಮಾ ಪ್ರಸನ್ನ, ಅಂಜಲಿ ಪವನ್ ಕುಮಾರ್, ಹಾಗೂ ಇನ್ನು ಮುಂತಾದವರು ಇದ್ದರು.

ಶಿವಮೊಗ್ಗ ಜಿಲ್ಲಾದ್ಯಂತ ಇಂದು ಸ್ವರ್ಣ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಯಿತು.  ಹೇಗಿತ್ತು ಸ್ವರ್ಣಗೌರಿ ಹಬ್ಬ…..?  ನೋಡೋಣ ಬನ್ನಿ

ವಿಘ್ನ ನಿವಾರಕ ಗಣಪನ ಹಬ್ಬದ ಮುನ್ನ ದಿನ, ತಾಯಿ ಗೌರಿ ಹಬ್ಬವನ್ನು, ಸಂಪ್ರದಾಯವಾಗಿ ದೇಶದೆಲ್ಲೆಡೆ ಆಚರಿಸಲಾಗುತ್ತದೆ. ತವರಿನೊಂದಿಗಿನ ಅವಿನಾಭಾವ ಸಂಬಂಧದ ಸಂಕೇತವಾಗಿರುವ ಗೌರಿ ಹಬ್ಬ ಬಂತೆಂದರೆ ಹೆಣ್ಣು ಮಕ್ಕಳಿಗೆ ಸಂಭ್ರಮ.   ಮದುವೆಯಾಗಿರಲಿ, ಆಗಿರದೆ ಇರಲಿ, ಹೆಣ್ಣು ಮಕ್ಕಳಿಗೆ ಗೌರಿ ಹಬ್ಬದಲ್ಲಿ ಹೆತ್ತವರು ಅಥವಾ ಸೋದರ ಸಂಬಂಧಿಗಳು ಉಡುಗೊರೆ ನೀಡಿ ನೂರ್ಕಾಲ ಬಾಳೆಂದು ಹಾರೈಸುವುದು ರೂಢಿ.  ಹೇಳಿ ಕೇಳಿ ಇದು ಮಹಿಳೆಯರದೇ ಹಬ್ಬವಾಗಿರೋದ್ರಿಂದ, ಮಹಿಳೆಯರೇ, ಗೌರಿಯನ್ನು ಪೂಜಿಸಿ, ಆರತಿ ಬೆಳಗಿ, ನಮಸ್ಕರಿಸುತ್ತಾರೆ. 

ವಿಶೇಷ ಪೂಜಾ ಸಾಮಾಗ್ರಿಗಳೊಂದಿಗೆ ಅಣಿಯಾದ ಮಹಿಳೆಯರು, ಗೌರಿಗೆ ಆರತಿ ಬೆಳಗಿ, ತಾಯಿ, ನಮ್ಮನ್ನು ರಕ್ಷಿಸು, ಹರಸು ಎಂದು ಆರತಿ ಬೆಳಗಿ, ಭಕ್ತಿಯ ಹಾಡುಗಳನ್ನು ಹಾಡುತ್ತಾ, ಪೂಜೆ ಸಲ್ಲಿಸುತ್ತಾರೆ.  ಅದರಂತೆ, ಇಂದು ನಗರದ ವಿವಿಧ ದೇವಾಲಯದಲ್ಲಿಯೂ ಕೂಡ ಸ್ವರ್ಣ ಗೌರಿಯನ್ನು, ವಿಶೇಷ ಅಲಂಕಾರಗಳಿಂದ ಪ್ರತಿಷ್ಟಾಪಿಸಿ, ಹೂಗಳಿಂದ ಅಲಂಕರಿಸಿ, ಪೂಜಿಸಲಾಯಿತು.  ಕೊರೋನಾ ಸೋಂಕು ಭೀತಿ ಬಳಿಕ ಕಳೆದೆರೆಡು ವರ್ಷಗಳ ಬಳಿಕ ಇಂದು ಸ್ವರ್ಣಗೌರಿ ಹಬ್ಬವನ್ನು ಅತ್ಯಂತ ವೈಭವದಿಂದ, ಬಾಗಿನ ಅರ್ಪಿಸಿ ಪೂಜೆ ನೆರವೇರಿಸಲಾಯಿತು.

ತನ್ನನ್ನು ನಂಬಿದ ಭಕ್ತರ ಇಷ್ಟಾರ್ಥಗಳನ್ನು, ಈಡೇರಿಸುವ ಗಣಪ ಭೂಲೋಕಕ್ಕೆ ಇಳಿದು ಬರುತ್ತಿದ್ದಾನೆ.  ವಿಘ್ನನಾಶಕನ ಬರುವಿಕೆಗೆ ಒಂದು ದಿವಸ ಮುಂಚೆಯೇ ಅವನ ಹೆಮ್ಮೆಯ ಅಮ್ಮ, ಸ್ವರ್ಣಗೌರೀಯೂ ಧರೆಗೆ ಬಂದಿಳಿದಿದ್ದಾಳೆ.  ಹೀಗಾಗಿ ನಗರದ ವಿವಿಧ ದೇವಾಲಯದಲ್ಲಿ, ಸುಮಂಗಲಿಯರು ಉಡಿ ತುಂಬಿ ಸಂಭ್ರಮಿಸಿದರು.  ಕಳೆದ 75 ವರ್ಷಗಳಿಂದ ಇಲ್ಲಿ ಗೌರಿಯನ್ನು ಇಲ್ಲಿ ಪ್ರತಿಷ್ಠಾಪಿಸಲಾಗುತ್ತಿದ್ದು, ವಿಶೇಷವಾಗಿ ಇಲ್ಲಿ ಮಹಿಳೆಯರೇ ಗೌರಿಯನ್ನು ಪೂಜಿಸಿ, ಬಾಗಿನ ಅರ್ಪಿಸಿ ಪೂಜೆ ಸಲ್ಲಿಸುವುದು ವಾಡಿಕೆ.  ಅದರಂತೆ, ಇಂದು ಗೌರಿಯನ್ನು ಪೂಜಿಸಲು ಮಹಿಳೆಯರು ದೇವಾಲಯದಲ್ಲಿ ಸಾಲಾಗಿ ನಿಂತು ಭಕ್ತಿಯಿಂದ ಪೂಜೆ ಸಲ್ಲಿಸುತ್ತಿದ್ದು, ಕಂಡು ಬಂದಿದೆ.  ಬಾಗಿನ, ವಿಶೇಷ ಪೂಜಾ ಸಾಮಾಗ್ರಿಗಳೊಂದಿಗೆ ಆಗಮಿಸಿದ್ದ ಮಹಿಳೆಯರು, ದೇವಾಲಯದಲ್ಲಿ ತಮ್ಮ ಸಂಭಂದಿಕರಿಗೆ ಬಾಗಿನ ನೀಡಿ, ಉಡಿ ತುಂಬಲಾಗಿದೆ.

ಒಟ್ಟಿನಲ್ಲಿ, ಇಂದು, ನಗರದಲ್ಲಿ, ಮನೆ ಮನೆಗಳಲ್ಲಿ, ದೇವಾಲಯಗಳಲ್ಲಿ, ಸಡಗರ ಮತ್ತು ಸಂಭ್ರಮದಿಂದ ಗೌರಿ ಹಬ್ಬವನ್ನು ಆಚರಿಸಲಾಯಿತು.  ಜಗತ್ತಿನ ಎಲ್ಲಾ ಅಡ್ಡಿ ಆತಂಕಗಳನ್ನು ಅದರಲ್ಲೂ, ಈ ಬಾರಿಯ ರೋಗ ರುಜ್ಜೀನಗಳ ಕಾಟ ನಿವಾರಿಸಿ, ಕೆಲಸ ಕಾರ್ಯಗಳೆಲ್ಲಾ ನಿರ್ವಿಘ್ನವಾಗಿ ನಡೆಯಲೆಂದು ಆಶೀರ್ವದಿಸಲು, ಭಾದ್ರಪದ ಮಾಸ ಶುಕ್ಲ ಪಕ್ಷ ಚತುರ್ಥಿಯಂದು, ವಿಘ್ನವಿನಾಯಕ, ಗೌರಿ ಸುತ ಗಣಪ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆಗೊಳ್ಳಲಿದ್ದಾನೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago