ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ.

ಸೆ‌.29 ರ ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ನಡೆಯುವ ಮಲೆನಾಡ ಅಕ್ಷರೋತ್ಸವ -2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಇದರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇವರಿಗೆ ಶಿಕ್ಷಣ ಮತ್ತು ಸಮಾಜ ಸೇವಾ ವಿಭಾಗದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಎನ್.ಡಿ.ಹೆಗಡೆಯವರು ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕಳೆದ 10 ವರ್ಷಗಳಿಂದ ತಮ್ಮ ವಿಷಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.100 ಬರುವಂತೆ ಗುಣ ಮಟ್ಟದ ಬೋಧನೆ, ವಿದ್ಯಾರ್ಥಿಗಳಿಗೆ ವಿಜ್ಞಾನ ನಾಟಕ, ಹಾಡು, ಭಾಷಣ, ಪ್ರಬಂಧ, ಕೋಲಾಟ, ಐತಿಹಾಸಿಕ ಮತ್ತು ಸಾಮಾಜಿಕ ಮತ್ತು ಪರಿಸರ ಜಾಗೃತಿ ನಾಟಕ ಇತ್ಯಾದಿಗಳಲ್ಲಿ ತರಬೇತಿ ನೀಡಿ ಜಿಲ್ಲಾ  ಮಟ್ಟ ಮತ್ತು ವಿಭಾಗ ಮಟ್ಟದವರೆಗೆ ಬಹುಮಾನ ದೊರಕಿಸಿಕೊಟ್ಟಿದ್ದಾರೆ.

ಶಾಲೆಯ ಕಾರಿಡಾರ್ ನಲ್ಲಿ ಮಳೆಗಾಲದಲ್ಲಿ ವಿಪರೀತ ಕೆಸರು ಉಂಟಾಗಿ ವಿದ್ಯಾರ್ಥಿಗಳು ಓಡಾಡುವುದು ಕಷ್ಟ ಎಂಬುದನ್ನು ಮನಗಂಡು ಎಸ್.ಡಿ.ಎಂ.ಸಿ ಮತ್ತು ಸಹೋದ್ಯೋಗಿಗಳ ನೆರವು ಪಡೆದು ಶಾಲೆಯ ಬಿಡುವಿನ ಅವಧಿಯಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಸಿಮೆಂಟ್, ಮರಳು, ಜಲ್ಲಿ ಬಳಸಿ ಇಂಟರ್‌ಲಾಕ್ ತಯಾರಿಸಿ ಅಳವಡಿಸಿ ಇಡೀ ಜಿಲ್ಲೆಯ ಎಲ್ಲಾ ಶಾಲೆಗಳ ಗಮನ ಸೆಳೆದಿದ್ದಾರೆ.

ರಜೆಯ ಸಮಯದಲ್ಲಿ ರಾಜ್ಯದ ಬೇರೆ ಬೇರೆ ಕಡೆ ಆಮಂತ್ರಣ ಸ್ವೀಕರಿಸಿ ಕೊಳವೆಬಾವಿ ಪಾಯಿಂಟ್ ಮಾಡಿ ಯಶಸ್ಸು ಗಳಿಸಿ ಸಾವಿರಾರು ರೈತರಿಗೆ ನೆರವು ನೀಡಿದ್ದಾರೆ. ಆನಂದಪುರದಲ್ಲಿ ರಾಯಲ್ ಕ್ಲಬ್ ಎಂಬ ಸಮಾಜ ಸೇವಾ ಸಂಸ್ಥೆಗೆ ಮಾರ್ಗದರ್ಶನ ನೀಡಿ ನೂರಾರು ಸಮಾಜ ಮುಖಿ ಕಾರ್ಯಕ್ಕೆ ಪ್ರೇರಣೆ ನೀಡಿದ್ದಾರೆ.

ಯಕ್ಷಗಾನ ತಾಳಮದ್ದಲೆ, ಗಮಕ ವ್ಯಾಖ್ಯಾನ, ಭಾವೈಕ್ಯತೆ ಮೂಡಿಸುವ ಭಾಷಣ ,ಪ್ರೌಢ ಶಾಲೆಯ ಕನ್ನಡ ಪಠ್ಯ ಪುಸ್ತಕದ ಹಳಗನ್ನಡ ಕಾವ್ಯ ಭಾಗ ಮತ್ತು ಜಾನ ಪದ ಕವನಗಳ ಸುಲಭ ಅರ್ಥೈಸುವಿಕೆಗೆ ಪೂರಕವಾಗಿ ಕಲಾವಿದರ ಸಹಾಯ ಪಡೆದು ಯೂ ಟ್ಯೂಬ್ ಮೂಲಕ ಪಾಠ ನೀಡಿದ್ದಾರೆ.

ಸಾವಿರಾರು ಸ್ವರಚಿತ ಕವನ ರಚಿಸಿದ ಇವರಿಗೆ ಯಲ್ಲಾಪುರದ ಸಮಾಜ ಸೇವಾ ಸಂಸ್ಥೆ ಜಲ ರತ್ನ ಕವಿ ಎಂಬ ಬಿರುದು ನೀಡಿ ಗೌರವಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.ಇವರ ವಿಶಿಷ್ಟ ಸಾಧನೆಗೆ ಈಗ ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

14 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

14 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

16 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago