Headlines

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ.

ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ.

ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ. ಧನುಷ್(20) ಹಾಗೂ ಶ್ರೀಧರ್(20) ಮೃತ ದುರ್ಧೈವಿಯಾಗಿದ್ದಾರೆ.

ನಡೆದಿದ್ದೇನು..!?

ಲಿಂಗದಹಳ್ಳಿ ಗ್ರಾಮದ ಒಂಬತ್ತು ಯುವಕರು ಇಂದು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಟಾಟಾ ಏಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಇದರಲ್ಲಿದ್ದ ಉಳಿದ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ತೀವ್ರವಾದ ರಕ್ತಸ್ರಾವವಾಗಿದೆ.

ಚಾಲಕ ಮನೋಜ್ ಹಾಗೂ ಮತ್ತೋರ್ವನನ್ನು ಮೆಗ್ಗಾನ್ ತುರ್ತುಘಟಕಕ್ಕೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *