ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ
ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ.
ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು ಗಾಯಗೊಂಡಿದ್ದರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಕುರಿತು ಅಂದಿನ ತನಿಖಾಧಿಕಾರಿ ಸುರೇಶ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿ 5 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ ಗಾಯಾಳು ಕೃಷ್ಣಮೂರ್ತಿಗೆ 25 ಸಾವಿರ ರೂ ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ವಾದ ಮಂಡಿಸಿದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…