POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

InShot 20241021 171523599.jpg

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ.

ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ.

ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬೆಂಕಿ ತೀವ್ರ ತರದಲ್ಲಿ ಉರಿಯುತ್ತಿದ್ದರಿಂದ ಮೂರ್ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು.

ಇನ್ನು, ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ದೊಡ್ಡಪೇಟೆ ಠಾಣೆಯಲ್ಲಿ ಆತನ ವಿಚಾರಣೆ ನಡೆಯುತ್ತಿದೆ.

ಘಟನೆಯಿಂದಾಗಿ ಕಾರ್ತಿಕ್‌ ಮೋಟರ್ಸ್‌ ಶೂಂನಲ್ಲಿ ದೊಡ್ಡ ಮಟ್ಟದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಒಳಾಂಗಣ ವಿನ್ಯಾಸ, ಕೆಲವು ವಾಹನಗಳು, ಎಲೆಕ್ಟ್ರಾನಿಕ್‌ ಉಪಕರಣಗಳು ಹಾನಿಗೀಡಾಗಿವೆ. ಮೇಲ್ನೋಟಕ್ಕೆ ಲಕ್ಷಾಂತರ ರೂ. ನಷ್ಟವಾಗಿರುವುದು ಗೋಚರಿಸುತ್ತದೆ. ನಷ್ಟದ ಅಂದಾಜು ಇನ್ನಷ್ಟೆ ತಿಳಿಯಬೇಕಿದೆ..

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.