ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ
ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ನಗರದ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ.
ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬೆಂಕಿ ತೀವ್ರ ತರದಲ್ಲಿ ಉರಿಯುತ್ತಿದ್ದರಿಂದ ಮೂರ್ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು.
ಇನ್ನು, ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ದೊಡ್ಡಪೇಟೆ ಠಾಣೆಯಲ್ಲಿ ಆತನ ವಿಚಾರಣೆ ನಡೆಯುತ್ತಿದೆ.
ಘಟನೆಯಿಂದಾಗಿ ಕಾರ್ತಿಕ್ ಮೋಟರ್ಸ್ ಶೂಂನಲ್ಲಿ ದೊಡ್ಡ ಮಟ್ಟದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಒಳಾಂಗಣ ವಿನ್ಯಾಸ, ಕೆಲವು ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೀಡಾಗಿವೆ. ಮೇಲ್ನೋಟಕ್ಕೆ ಲಕ್ಷಾಂತರ ರೂ. ನಷ್ಟವಾಗಿರುವುದು ಗೋಚರಿಸುತ್ತದೆ. ನಷ್ಟದ ಅಂದಾಜು ಇನ್ನಷ್ಟೆ ತಿಳಿಯಬೇಕಿದೆ..
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…