ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು.


ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು.
ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ ಭಾಷೆ, ಕನ್ನಡ ನಾಡು ಉಳಿಯಲು, ಬೆಳೆಯಲು, ನಿರಂತತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ವರ್ಷ ಮಂಡ್ಯದಲ್ಲಿ ನಡೆಯುವಂತಹ 87ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡ ಜ್ಯೋತಿ ರಥ” ಬಂದಿದೆ.ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ ಬೀಳ್ಕೊಡಲಾಗುತ್ತಿದೆ ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಜಿಲ್ಲಾ ಕಸಾಪ ಅಧ್ಯಕ್ಷ ಡಿ ಮಂಜುನಾಥ್ , ತಾಪಂ ಕಾರ್ಯನಿರ್ವಹಣಾಧಿಕಾರಿ ನರೇಂದ್ರ , ಕಸ್ತೂರಿ ಕನ್ನಡ ಸಂಘ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ಮತ್ತು ಪಧಾದಿಕಾರಿಗಳು , ಕನ್ನಡ ಪ್ರೇಮಿಗಳು , ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಇದ್ದರು.
ಏನಿದು ಕನ್ನಡ ಜ್ಯೋತಿ ರಥ ಯಾತ್ರೆ?
ಮೈಸೂರು ರಾಜ್ಯವು ಕರ್ನಾಟಕವೆಂದು ಮರು ನಾಮಕರಣವಾಗಿ 2023ರ ನ.1ಕ್ಕೆ 50 ವರ್ಷ ಪೂರ್ಣಗೊಂಡ ಶುಭ ಸಂದರ್ಭಕ್ಕೆ ಸಿಎಂ ಸಿದ್ಧರಾಮಯ್ಯ, ಕಳೆದ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಸಂಭ್ರಮ-50 ಘೋಷಿಸಿದ್ದರು. ಅದರಡಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಅದರ ಅಂಗವಾಗಿ ಕನ್ನಡ ಜ್ಯೋತಿ ರಥೆಯಾತ್ರೆ ನಡೆಯುತ್ತಿದೆ.
ಈ ರಥಯಾತ್ರೆಯು ರಾಜ್ಯದ 31 ಜಿಲ್ಲೆಗಳೂ ಸೇರಿದಂತೆ 6 ಬೇರೆ ಬೇರೆ ರಾಜ್ಯದ ಗಡಿ ಪ್ರದೇಶದಲ್ಲಿ ಸಂಚರಿಸಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವಂತ ಸಕ್ಕರೆ ನಾಡು ಮಂಡ್ಯ ತಲುಪಲಿದೆ.