RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ
ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಿಪ್ಪನ್‌ಪೇಟೆಯ ರಾಮಕೃಷ್ಣ ವಿದ್ಯಾಲಯದ ಶ್ರಾವ್ಯ ಹಿರೆಮೈತೆ , ಶ್ರೇಯಾ ಬಿ ಆರ್ , ಧೀಕ್ಷಾ ಆರ್ , ಸಂಜನಾ ಎನ್ ,ಐಶ್ವರ್ಯ ವಿ ಎಸ್ ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕಬ್ಬಡಿ ಪಂದ್ಯಾವಳಿಯಲ್ಲಿ ಅದ್ವಿತೀಯ ಸಾಧನೆಗೈದ ವಿದ್ಯಾರ್ಥಿಗಳು ಪಟ್ಟಣಕ್ಕೆ ಆಗಮಿಸುತಿದ್ದಂತೆ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ತೆರೆದ ವಾಹನದಲ್ಲಿ ಡೊಳ್ಳು ವಾದ್ಯದ ಮೆರವಣಿಗೆ ಮೂಲಕ ವಿನಾಯಕ ವೃತ್ತದವರೆಗೂ ಕರೆತಂದು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ರಾಮಕೃಷ್ಣ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ದೇವರಾಜ್ ಹಾಗೂ ಸರಿತಾ ದೇವರಾಜ್ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ ಶುಭ ಕೋರಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ,ಹಾಗೂ ಹಲವಾರು ಸಂಘ ಸಂಸ್ಥೆಗಳು, ಸಾರ್ವಜನಿಕರು , ಪೋಷಕರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಈ ಸಂಧರ್ಭದಲ್ಲಿ ಶಾರದಾ ರಾಮಕೃಷ್ಣ ವಿದ್ಯಾಲಯದ ಮುಖ್ಯ ಶಿಕ್ಷಕರಾದ ರವಿ , ಸಹ ಶಿಕ್ಷಕರು ಹಾಗೂ ವ್ಯವಸ್ಥಾಪಕರಾದ ಸಂದೇಶ್ ಹಾಗೂ ಪೋಷಕ ವೃಂದದವರು ,ಸಾರ್ವಜನಿಕರು ಇದ್ದರು.