

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ
ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ ಮಂಜಪ್ಪ ಬಿನ್ ಪುಟ್ಟಣ್ಣ ಶೆಟ್ಟಿ ರವರ ಮನೆಯ ಮೇಲೆ ಬೃಹತ್ ಆಕಾರದ ಮರ ಬಿದ್ದು ಭಾರಿ ಹಾನಿಯುಂಟಾಗಿತ್ತು.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ , ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಮನೆ ಹಾನಿಗೊಳಗಾದ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ಸಹಾಯ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಕಂದಾಯ ಇಲಾಖೆಯ ಸೈಯದ್ ಅಫ಼್ರೋಜ್ ಹಾಗೂ ಇನ್ನಿತರರಿದ್ದರು.
