POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

GridArt 20241001 161433510.jpg

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ.

ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ.

ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ 4 ಸದಸ್ಯರಿರುವ ಗ್ರಾಪಂ ಬಿಜೆಪಿ ತೆಕ್ಕೆಯಲ್ಲಿತ್ತು .ಹಿಂದಿನ ಬಾರಿ ಅಧ್ಯಕ್ಷರಾಗಿದ್ದ ವಿಶ್ವನಾಥ್ ಗಂಧ್ರಳ್ಳಿ ಪಕ್ಷದೊಳಗಿನ ಒಡಂಬಡಿಕೆಯಂತೆ ದೇವರಾಜ್ ರವನ್ನು ಆಯ್ಕೆ ಮಾಡುವ ಉದ್ದೇಶದಿಂದ ರಾಜೀನಾಮೆ ಸಲ್ಲಿಸಿದ್ದರು.

ಬದಲಾದ ರಾಜಕೀಯ ಸ್ಥಿತ್ಯಂತರಕ್ಕೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಸಚಿನ್ ಗೌಡ ಇಬ್ಬರು ಸದಸ್ಯರೊಂದಿಗೆ ಹೊರಬಂದು ಕಾಂಗ್ರೆಸ್ ಪಕ್ಷ ಬೆಂಬಲಿತ ನಾಲ್ವರು ಸದಸ್ಯರ ಬೆಂಬಲದ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಶೀರ್ ಅಹಮದ್ , ಸುರೇಶ್ , ಬಿದರಹಳ್ಳಿ ಉಮೇಶ್ ಹಾಗೂ ಗ್ರಾಪಂ ಸದಸ್ಯರು ,ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.