ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ.
ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ರೇಶ್ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿದ್ದಾರೆ.
ಪೊಲೀಸ್ ಪೇದೆ ಕೋಟ್ರೆಶ್ ಪ್ರೇಯಸಿ ಆಯಿಷಾಳ ಪಕ್ಕದ ಮನೆಯಲ್ಲಿ ವಾಸವಾಗಿದ್ದಾನೆ. ಆಯಿಷಾ ಪೊಲೀಸ್ ಪೇದೆ ಕೊಟ್ರೇಶ್ನನ್ನು ಮಂಗಳವಾರ ಮಧ್ಯರಾತ್ರಿ ಮನೆಗೆ ಕರೆಸಿದ್ದಾಳೆ. ಬಳಿಕ, ಕೊಟ್ರೇಶ್ ದಿಂಬಿನಿಂದ ಉಸಿರುಗಟ್ಟಿಸಿ ಆಯಿಷಾ ಪತಿ ಇಫ್ರಾಜ್ರನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಪಕ್ಕದ ಕೋಣೆಯಲ್ಲಿ ಮಲಗಿದ್ದ ಇಫ್ರಾಜ್ ಅವರ ಅಕ್ಕನ ಮಗ ತಡೆದಿದ್ದಾರೆ. ಇಫ್ರಾಜ್ರನ್ನು ಬಚಾವ್ ಮಾಡಿದ್ದಾರೆ. ನಂತರ, ಆಯಿಷಾ ಮತ್ತು ಕಟ್ರೋಶ್ ನಡುವಿನ ಅಕ್ರಮ ಸಂಬಂಧ ಬಯಲಾಗಿದೆ.
ಆರೋಪಿ ಕೋಟ್ರೆಶ್ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ. ನಂತರ, ಇಫ್ರಾಜ್ ಕೊಡಗು ಎಸ್ಪಿ ರಾಮರಾಜನ್ ಅವರಿಗೆ ದೂರು ನೀಡಿದ್ದಾರೆ. ಎಸ್ಪಿ ಸೂಚನೆ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಆರೋಪಿ ಕೊಟ್ರೇಶ್ನನ್ನು ಬಂಧಿಸಲಾಗಿದೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…