ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು
ಬಂಕಾಪುರ : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿ ಹೆಡೆಮುರಿ ಕಟ್ಟಿ 14 ಬೈಕ್ ಸಮೇತ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಕಾಪೂರ, ಶಿಗ್ಗಾಂವ, ರಾಣೆಬೆನ್ನೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದ್ವಿ ಚಕ್ರ, ವಾಹನಗಳು ಕಳ್ಳತನ ಪ್ರಕರಣಗಳು ನಡೆಯುತಿದ್ದ ಹಿನ್ನಲೆ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ 5.50 ಲಕ್ಷ ಮೌಲ್ಯದ 14 ಬೈಕ್ ಹಾಗೂ 20 ಸಾವಿರ ರೂ ಮೌಲ್ಯದ ಆಯಿಲ್ ಪಂಪ್ ಗಳನ್ನು ವಶಕ್ಕೆ ಪಡೆದು ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿತರಾದ ವಿನಾಯಕ , ಕರಬಸಪ್ಪ , ಮಧು , ಆನಂದಗೌಡ ,ಕುಮಾರಗೌಡ, ವಿಜಯಕುಮಾರ ರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗಳಾದ ಹನಮಂತಪ್ಪ, ಚಂದ್ರಕಾಂತ ರವರು ಪರಾರಿಯಾಗಿದ್ದಾರೆ.
ಆರೋಪಿತರಿಗೆ ದಸ್ತಗೀರ ಮಾಡಿ ಕಳ್ಳತನ ಮಾಡಿದ ದ್ವಿ ಚಕ್ರ ವಾಹನಗಳನ್ನು ಮತ್ತು ಆಯಿಲ್ ಮಷೀನ್ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಪಡಿಸಿದ್ದು. ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ಆರೋಪಿತರನ್ನು ಪತ್ತೆ ಮಾಡಿದ ನಿಂಗಪ್ಪ ಕರಕಣ್ಣನವರ ಪಿಎಸ್‌ಐ ಬಂಕಾಪೂರ ಪೊಲೀಸ್ ಠಾಣೆ ಹಾಗೂ ಪತ್ತೆ ಕಾರ್ಯದಲ್ಲಿ ತೊಡಗಿದ ಸಿಬ್ಬಂದಿಗಳಾದ ಎಸ್ ಎಮ್ ವನಹಳ್ಳಿ ಪಿಎಸ್‌ಐ 2 , ಬಿ ಎನ್ ಅಗಸಿಮನಿ ಎ.ಎಸ್.ಐ. ಕೆ ರಜನಿ ಮಎಎಸ್‌ಐ, ಎ ಕೆ ನದಾಪ, ಗೊವಿಂದ ಲಮಾಣಿ, ಪ್ರವೀಣ ಕೋಟಿಹಾಳ, ಜಬೀವುಲ್ಲಾ ದೊಡ್ಡಮನಿ, ಕರಬಸಪ್ಪ ಹಾವಣಗಿ, ಬೀರಪ್ಪ ಕಳ್ಳಿಮನಿ, ಶಂಕರ ಗೊಂದಳಿ, ನಿಂಗಪ್ಪ ಪೂಜಾರ,ವಾಸು ಹೆಗಡೆ, ಷಣ್ಮುಖ ಲಮಾಣಿ, ಮತ್ತು ತಾಂತ್ರಿಕ ಸಿಬ್ಬಂದಿಗಳಾದ ಸತೀಶ ಮಾರಕಟ್ಟೆ ಮಾರುತಿ ಹಾಲಬಾವಿ ನೇದವರಿಗೆ ಇದ್ದರು.
ಹಾವೇರಿಯ ಪೊಲೀಸ್ ಅಧೀಕ್ಷಕರಾದ ಅಂಶುಕುಮಾರ್ ಈ ಪ್ರಕರಣವನ್ನು ಪತ್ತೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್