ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ.

ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ ಸಮಾಜವಾದಿ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ಮತ್ತು ಬಿಜೆಪಿಗೆ ತಲಾ ಎರಡು ಸಲ ಪಕ್ಷಾಂತರ ಮಾಡಿದ್ದ ಅವರು, ಇದೀಗ ಮತ್ತೆ ಕಾಂಗ್ರೆಸ್‌ಗೆ ಬಂದಿದ್ದಾರೆ.

ಉದ್ಯಮಿಯಾಗಿದ್ದ ಯೋಗೇಶ್ವರ್ ರಾಜಕೀಯ ಪಯಣ ಶುರುವಾಗಿದ್ದು ಕಾಂಗ್ರೆಸ್‌ನಿಂದ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ (ಕೆಪಿಸಿಸಿ) ಕಾರ್ಯದರ್ಶಿಯಾಗಿದ್ದ ಅವರು, 1999ರ ಚುನಾವಣೆಗೆ ಪಕ್ಷದಿಂದ ಟಿಕೆಟ್‌ ಸಿಗದಿದ್ದಾಗ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದರು. ಮೊದಲ ಚುನಾವಣೆಯಲ್ಲೇ ಬಂಡಾಯದ ಬಾವುಟ ಹಾರಿಸಿ ಗೆದ್ದ ಅವರು, ಮತ್ತೆ ‘ಕೈ’ ಹಿಡಿದು 2004 ಮತ್ತು 2008ರ ಚುನಾವಣೆಗಳಲ್ಲಿ ಗೆಲುವು ಸಾಧಿಸಿದರು.

2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ನಡೆದ ಆಪರೇಷನ್ ಕಮಲದ ಅಲೆಗೆ ಸಿಲುಕಿದ ಯೋಗೇಶ್ವರ್, ಒಂದೇ ವರ್ಷದಲ್ಲಿ ಕಾಂಗ್ರೆಸ್‌ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. ಮಾರನೇಯ ವರ್ಷ 2009ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್‌ನ ಎಂ.ಸಿ. ಅಶ್ವಥ್ ವಿರುದ್ಧ ಪರಾಭವಗೊಂಡರು.

ಜೆಡಿಎಸ್‌ನಿಂದ ಗೆದ್ದಿದ್ದ ಅಶ್ವಥ್ ಸಹ ಒಂದು ವರ್ಷದ ಬಳಿಕ 2010ರಲ್ಲಿ ‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಗೆ ಬಂದರು. ಕ್ಷೇತ್ರಕ್ಕೆ 2011ರಲ್ಲಿ ಉಪ ಚುನಾವಣೆ ಎದುರಾಯಿತು. ಆಗ ಬಿಜೆಪಿಯಿಂದ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಯೋಗೇಶ್ವರ್, ಜೆಡಿಎಸ್‌ನ ಸಿಂ.ಲಿಂ. ನಾಗರಾಜು ವಿರುದ್ಧ ಜಯ ಸಾಧಿಸಿದರು.

2013ರ ಸಾರ್ವತ್ರಿಕ ಚುನಾವಣೆಯ ಹೊತ್ತಿಗೆ ಮತ್ತೆ ಕಾಂಗ್ರೆಸ್‌ನತ್ತ ವಾಲಿದ ಯೋಗೇಶ್ವರ್ ಅವರಿಗೆ ಪಕ್ಷ ‘ಬಿ ಫಾರಂ’ ನೀಡಲಿಲ್ಲ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಇರುವಾಗ ಸಮಾಜವಾದಿ ಪಕ್ಷದ (ಎಸ್‌.ಪಿ) ಟಿಕೆಟ್‌ ತಂದು ಸ್ಪರ್ಧಿಸಿದ ಅವರು, ಅಭೂತಪೂರ್ವ ಗೆಲುವು ಸಾಧಿಸಿದರು. 2018ರ ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಬಂದ ಅವರು, ಆ ವರ್ಷದ ಚುನಾವಣೆಯಲ್ಲಿ ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸೋತರು.

ಆ ವರ್ಷ ಅಧಿಕಾರಕ್ಕೇರಿದ ಬಿಜೆಪಿಯು, ಸೋತಿದ್ದ ಯೋಗೇಶ್ವರ್ ಅವರನ್ನು ವಿಧಾನ ಪರಿಷತ್‌ ಸದಸ್ಯನನ್ನಾಗಿ ಮಾಡಿ, ಸಚಿವ ಸ್ಥಾನ ನೀಡಿತು. ಆಗ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಸಿ.ಎಂ ಕುರ್ಚಿಗೆ ಕೂರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅವರಿಗೆ ಮತ್ತೆ ಸಚಿವನಾಗುವ ಭಾಗ್ಯ ಸಿಗಲಿಲ್ಲ.

2023ರ ಚುನಾವಣೆಯಲ್ಲಿ ಯೋಗೇಶ್ವರ್ ಮತ್ತೆ ಬಿಜೆಯಿಂದ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದರೂ ಗೆಲುವು ದಕ್ಕದೆ, ಪರಿಷತ್ ಸ್ಥಾನದಲ್ಲೇ ಮುಂದುವರಿದಿದ್ದರು. 2024 ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿ ಗೆದ್ದಿದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ತೆರವಾಗಿರುವ ಸ್ಥಾನಕ್ಕೆ ನಡೆಯುತ್ತಿರುವ ಉಪ ಚುನಾವಣೆಗೆ ಸ್ಪರ್ಧಿಸಲು ಶುರುವಾದ ಟಿಕೆಟ್‌ ರಾಜಕಾರಣದಲ್ಲಿ ಕಾಂಗ್ರೆಸ್‌ ಕೈ ಹಿಡಿದಿರುವ ಯೋಗೇಶ್ವರ್, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಟಾಂಗ್ ಕೊಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮೈತ್ರಿ ವಿರುದ್ಧ ಅವರು ಸ್ಪರ್ಧಿಸುವುದು ಖಚಿತವಾಗಿದೆ.

ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದ ಶಿಕ್ಷಕ ಪುಟ್ಟಮಾದೇಗೌಡರ ಪುತ್ರನಾದ ಯೋಗೇಶ್ವರ್, ಯಾರ ಆಸರೆಯೂ ಇಲ್ಲದೆ ಸ್ವಂತ ಬಲದಲ್ಲಿ ಬೆಳೆದ ರಾಜಕಾರಣಿ. ಕಳೆದ 25 ವರ್ಷಗಳಿಂದ ಚನ್ನಪಟ್ಟಣ ರಾಜಕಾರಣದಲ್ಲಿ ಸಕ್ರಿಯವಾಗಿರುವ ಅವರು ಉದ್ಯಮಿ, ಸಿನಿಮಾ ನಟ ಹಾಗೂ ರಾಜಕಾರಣಿಯಾಗಿ ಪರಿಚಿತ. ಯಾವ ಪಕ್ಷಗಳ ನಿಯಂತ್ರಣಕ್ಕೂ ಸಿಗದ ಅವರು, ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ.

ಸೈನಿಕನ ಪಕ್ಷಾಂತರ ಹಾದಿ

1999: ಕೆಪಿಸಿಸಿ ಕಾರ್ಯದರ್ಶಿಯಾಗಿದ್ದ ಯೋಗೇಶ್ವರ್, ಚನ್ನಪಟ್ಟಣ ಕ್ಷೇತ್ರದಲ್ಲಿ ಪಕ್ಷದ ಟಿಕೆಟ್‌ ಸಿಗದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು.

2004: ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು.

2008: ಕಾಂಗ್ರೆಸ್‌ನಿಂದ ಮತ್ತೆ ಸ್ಪರ್ಧಿಸಿ ಗೆಲುವು

2008: ಆಪರೇಷನ್ ಕಮಲದ ಸಂದರ್ಭದಲ್ಲಿ ಒಂದೇ ವರ್ಷಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆ

2009: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಸೋಲು.

2009: ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ಎಂ.ಸಿ. ಅಶ್ವಥ್ ವಿರುದ್ಧ ಸೋಲು.

2011: ಜೆಡಿಎಸ್ ಶಾಸಕ ಅಶ್ವಥ್ ರಾಜೀನಾಮೆಯಿಂದ ನಡೆದ ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಜೆಡಿಎಸ್‌ನ ಸಿಂ.ಲಿಂ. ನಾಗರಾಜು ವಿರುದ್ಧ ಗೆಲುವು.

2013: ಕಾಂಗ್ರೆಸ್‌ಗೆ ಸೇರ್ಪಡೆಯಾದರೂ ಸ್ಪರ್ಧೆಗೆ ‘ಬಿ ಫಾರಂ’ ಸಿಗದಿದ್ದರಿಂದ ಮತ್ತೆ ಪಕ್ಷಕ್ಕೆ ಗುಡ್‌ಬೈ.

2013: ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಗೆಲುವು

2018: ಸಮಾಜವಾದಿ ಪಕ್ಷ ತೊರೆದು ಬಿಜೆಪಿಯಿಂದ ಮತ್ತೆ ಕಣಕ್ಕಿಳಿದು ಕುಮಾರಸ್ವಾಮಿ ಎದುರು ಸೋಲು

2023: ಬಿಜೆಪಿಯಿಂದ ಮತ್ತೆ ಕುಮಾರಸ್ವಾಮಿ ಎದುರು ಸ್ಪರ್ಧಿಸಿ ಸೋಲು.

2024: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ‌

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago