POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

GridArt 20241015 194825754 1.jpg

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಅಪಘಾತ ಸ್ಥಳದಲ್ಲಿದ್ದ ಸ್ಥಳೀಯರು ಗಾಯಾಳುಗಳನ್ನು ಕೋಣಂದೂರು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.