ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ
ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು.
ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್ ಐ ಹಾಲಪ್ಪ , ಮಂಜಪ್ಪ,ಗಿರೀಶ್ ಹಾಗೂ ಸಿಬ್ಬಂದಿಗಳಾದ ಉಮೇಶ್ , ಪರಮೇಶ್ವರಪ್ಪ, ಸಂತೋಷ್ ಕೊರವರ , ರಾಮಚಂದ್ರಪ್ಪ, ಚನ್ನೇಶ್ , ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.


