POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಸರ್ಕಾರಿ ಜಮೀನು ಒತ್ತುವರಿ ತೆರವು

GridArt 20241024 185451435.jpg

ಸರ್ಕಾರಿ ಜಮೀನು ಒತ್ತುವರಿ ತೆರವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು.

ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು.

ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಅಕ್ರಮವಾಗಿ ಒತ್ತುವರಿ ಮಾಡಿದ್ದ ಸರ್ಕಾರಿ ಜಮೀನನ್ನು ತೆರವುಗೊಳಿಸಿದ್ದಾರೆ.

ಈ ಸಂಧರ್ಭದಲ್ಲಿ ಗ್ರಾಮಲೆಕ್ಕಿಗ ಶ್ರೀವಲ್ಲಿ , ಗ್ರಾಮ ಸೇವಕರಾದ ರಾಘು ,ಗಣೇಶ್ ,ದರ್ಶನ್ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.