January 11, 2026

ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರೀಲ್ಸ್ ರಾಣಿ!

ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ!

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ್ದಾಳೆ.ಪತ್ನಿ ಪ್ರತಿಮಾ ಪತಿ 44 ವರ್ಷದ ಬಾಲಕೃಷ್ಣ ಪೂಜಾರಿಗೆ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕಳೆದ 25 ದಿನಗಳಿಂದ ಬಾಲಕೃಷ್ಣ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಆತನಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿಕ ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಅ.20ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದರು. ಈ ಸಾವಿನ ಬಗ್ಗೆ ಪ್ರತಿಮಾಳ ಸಹೋದರ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆ ಪೊಲೀಸರು ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳು ಕೊಲೆ ರಹಸ್ಯ ಬಾಯಿಬಿಟ್ಟಿದ್ದಾರೆ.

ಪ್ರತಿಮಾಗೆ ರೀಲ್ಸ್ ಗೀಳು ಹಿಡಿದಿತ್ತು. ಬಲವಂತವಾಗಿ ಪತಿ ಬಾಲಕೃಷ್ಣ ಪೂಜಾರಿ ಜೊತೆ ಪ್ರತಿಮಾ ಹಲವು ರೀಲ್ಸ್ ಗಳನ್ನು ಮಾಡಿದ್ದಾಳೆ. ಈ ರೀಲ್ಸ್ ಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಳು. ಇದೇ ಇನ್ ಸ್ಟಾಗ್ರಾಂನಲ್ಲಿ ದಿಲೀಪ್ ಹೆಗ್ಡೆ ಮತ್ತು ಪ್ರತಿಮಾ ನಡುವೆ ಪರಿಚಯವಾಗಿತ್ತು.

About The Author

Leave a Reply

Your email address will not be published. Required fields are marked *

Exit mobile version