ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ –

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ.

ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳಲ್ಲಿ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ.ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ತಂಡ ಸ್ಥಳಕ್ಕೆ ತೆರಳಿ ಜಿಪಿಎಸ್ ಆಧಾರಿತ ಪೋಟೋ ಸಾಕ್ಶ್ಯದ ಮೂಲಕ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಲಾಗಿದೆ.

ಈ ಬಾರಿ ಸುರಿದ ಭಾರಿ ಮಳೆಯಿಂದ ಈ ಭಾಗದ ನದಿಯಲ್ಲಿ ಸಾವಿರಾರು ಲೋಡ್ ಮರಳು ಶೇಖರಣೆಯಾಗಿದ್ದು ಇದನ್ನು ಮರಳು ದಂಧೆಕೋರರು ಲೂಟಿ ಹೊಡೆದು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ ಬತ್ತಿ ಇಟ್ಟ ಮೇಲೆ ಗಣಿ ಇಲಾಖೆಯ ಅಧಿಕಾರಿಗಳು ಬಂದು ನಾಮಕಾವಸ್ಥೆ 2 ಬುಟ್ಟಿ 2 ಗುದ್ದಲಿ ವಶಪಡಿಸಿಕೊಂಡು ಆರೋಪಿ ಪರಾರಿ ಎಂದು ಪ್ರಕರಣ ದಾಖಲಿಸುತ್ತಾರೆ.

ಸ್ವಾಭಾವಿಕ ಖನಿಜ ಸಂಪತ್ತನ್ನು ಸಂರಕ್ಷಿಸುವ ಬೇಕಾಗಿದ್ದ ಗಣಿ ಮತ್ತು ಭೂವಿಜ್ಞಾನ, ಲೋಕೋಪಯೋಗಿ, ಕಂದಾಯ, ಅರಣ್ಯ, ಹಾಗೂ ಇತರ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳು ದಂಧೆಯನ್ನು ನಿಯಂತ್ರಿಸುವಲ್ಲಿ ಅಸಮರ್ಥರೋ ಅಥವಾ ಅಸಹಾಯಕರೋ ಎಂಬ ಜಿಜ್ಞಾಸೆ ಜನರಲ್ಲಿ ಮೂಡಿದ್ದು ಅಧಿಕಾರಿಗಳ ಗಮನದಲ್ಲಿ ಇದ್ದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ ಆದ್ದರಿಂದಲೇ ಅಧಿಕಾರಸ್ಥರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಈ ಭಾಗದ ನಾಗರಿಕರು ಮಾಹಿತಿ ನೀಡುತ್ತಾರೆ.

ರಿಪ್ಪನ್‌ಪೇಟೆಯ ಅರಣ್ಯ ಜಾಗದಲ್ಲಿ ಪ್ರಭಾವಿಯೊಬ್ಬನ ಮರಳು ಯಾರ್ಡ್

ರಿಪ್ಪನ್‌ಪೇಟೆ ಪಟ್ಟಣದ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಪಾತ್ರದಲ್ಲಿ ಈ ಬಾರಿದ ಸುರಿದ ಭಾರಿ ಮಳೆಗೆ ಸಾವಿರಾರು ಲೋಡ್ ಮರಳು ಶೇಖರಣೆಯಾಗಿದ್ದು ಇಲ್ಲೊಬ್ಬ ಖಾಸಗಿ ವ್ಯಕ್ತಿ ಅದನ್ನೆಲ್ಲಾ ತನ್ನದೇ ಆಸ್ತಿ ಎನ್ನುವ ರೀತಿಯಲ್ಲಿ ಅರಣ್ಯ ಇಲಾಖೆಯ ಹತ್ತಾರು ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡು ಖಾಸಗಿ ಮರಳು ಯಾರ್ಡ್ ನ್ನು ನಿರ್ಮಿಸಿ ಜಾಸ್ತಿ ಹಣ ಕೊಟ್ಟವರಿಗೆ ಟೆಂಡರ್ ಕೊಡುತ್ತೇನೆ ಎಂದು ಹೇಳುತ್ತಾನೆ ಎಂದರೆ ಸ್ವಾಭಾವಿಕ ಖನಿಜ ಸಂಪತ್ತನ್ನು ಸಂರಕ್ಷಿಸುವ ಹೊಣೆ ಹೊತ್ತಿರುವ ಅಧಿಕಾರಿಗಳ ಅಸಹಾಯಕತೆ ಎಷ್ಟಿದೆ ಎಂದು ಯೋಚಿಸಲೇ ಬೇಕಾಗುತ್ತದೆ ಅಲ್ವಾ..!?

ಒಟ್ಟಾರೆಯಾಗಿ ಇನ್ನಾದರೂ ಸಂಬಂಧಪಟ್ಟ ಇಲಾಖೆಯವರು ಇನ್ನಾದರೂ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರೋ ಎಂಬ ಅಲ್ಪ ಆಶಯದಿಂದ ಕಾದು ನೋಡಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

22 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

22 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

23 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago