ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಪಂಚಾಯತ್ ಕಾರ್ಯದರ್ಶಿ, ಲೆಕ್ಕ ಸಹಾಯಕ, ಕರಾ ವಸೂಲಿ ಸಿಬ್ಬಂದಿ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಪಂಚಾಯಿತಿ ಎಲ್ಲಾ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.

ಹಾಗಾಗಿ ರಿಪ್ಪನ್‌ಪೇಟೆ, ಕೆಂಚನಾಲ , ಅರಸಾಳು , ಹೆದ್ದಾರಿಪುರ ,ಕೊಡೂರು ,ಗರ್ತಿಕೆರೆ ,ಬೆಳ್ಳೂರು , ಆನಂದಪುರ, ಯಡೇಹಳ್ಳಿ, ಆಚಾಪುರ, ಗೌತಮಪುರ, ಹೊಸೂರು ಸೇರಿದಂತೆ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಸಾರ್ವಜನಿಕ ಸೇವೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನತೆಗೆ ಅನಾನುಕೂಲ ಉಂಟಾಗಿದೆ.