ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…

Read More