ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ : 1

ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ ಗಾಂಜಾ ಸಂಗ್ರಹಿಸಿರುವ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಹೊಳೆಹೊನ್ನೂರು ಪೊಲೀಸರು ಲಕ್ಷಾಂತರ ರೂ ಮೌಲ್ಯದ ಗಾಂಜಾ ಸಮೇತ ಆರೋಪಿಗಳಾದ ಸಂಜೀವ ಮತ್ತು ಗುರುಪ್ರಸಾದ್ ಎಂಬುವನನ್ನ ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತರಲಾಗಿದ್ದು ಅದನ್ನು ಉಡುಪಿಯ ಸೂರಜ್ ಕುಮಾರ್ ಎಂಬುವರಿಗೆ ಸರಬರಾಜು ಮಾಡಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದಾರೆ.

ದಾಳಿಯ ವೇಳೆ 5 ಕೆಜಿ 574 ಗ್ರಾಂ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ 2,80,000 ಎಂದು ಅಂದಾಜಿಸಲಾಗಿದೆ.ಈ ದಾಳಿಯಲ್ಲಿ ಭದ್ರಾವತಿ ಡಿವೈಎಸ್ಪಿ ನಾಗರಾಜ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ಪಿಐ ಲಕ್ಷ್ಮೀಪತಿ, ಪಿಎಸ್ಐ ರಮೇಶ್, ಹೊಸಮನೆ ಪಿಎಸ್ಐ ಕೃಷ್ಣಕುಮಾರ್ ಮಾನೆ ಹಾಗೂ ಸಿಬ್ವಂದಿಗಳು ಭಾಗಿಯಾಗಿದ್ದರು.

ಘಟನೆ : 2

ಭದ್ರಾವತಿಯ ಸೀಗೆಬಾಗಿಯಲ್ಲಿ ಹಳೇ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೊಹಮದ್ ಅಬ್ಬಾಸ್ ಎಂಬ ಯುವಕನನ್ನ ಬಂಧಿಸಿ 1 ಕೆಜಿ 37 ಗ್ರಾಂ ಒಣ ಗಾಂಜಾ ಹಾಗೂ 350 ರೂ ನಗದನ್ನ ವಶಕ್ಕೆ ಪಡೆಯಲಾಗಿದೆ.

ಸೆನ್ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.

Leave a Reply

Your email address will not be published. Required fields are marked *