POSTMAN NEWS

ನೈಜ ಸುದ್ದಿ ನೇರ ಬಿತ್ತರ..

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

GridArt 20241001 133611439.jpg

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ.

ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ ಪರಿಶೀಲಿಸಿ ಪಿಎಸ್‌ಐ ಶಿವಾನಂದ್ ಕೆ ರವರಿಗೆ ಮಾಹಿತಿ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.