ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ ಬೀಳುವಂತೆ ಇದ್ದ ಪಾಳು ಮನೆಯಲ್ಲಿ ವಾಸಿಸುತಿದ್ದರು.ಪತ್ರಕರ್ತರಾದ ಅರಸಾಳಿನ ಮೈಸ್ ಪಿಯೂಸ್ ರೋಡ್ರಿಗಸ್ ರವರು ಕಳೆದ ಹಲವಾರು ವರ್ಷಗಳಿಂದ ಒಂಟಿ ವೃದ್ದೆಯನ್ನು ಆರೈಕೆ ಮಾಡಿಕೊಂಡು ಬಂದಿದ್ದರು ಆದರೆ ಇತ್ತೀಚಿಗೆ ಅವರ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟು ಭಾರಿ ಸಂಕಷ್ಟಕೊಳಗಾಗಿದ್ದರು.

ಈ ಬಗ್ಗೆ ಮಾಹಿತಿಯನ್ನರಿತ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಪಿಯೂಸ್ ರವರ ಬಳಿ ಮಾಹಿತಿ ಪಡೆದುಕೊಂಡು ವೃದ್ದೆಯನ್ನು ವೈದ್ಯಕೀಯ ವ್ಯವಸ್ಥೆಯಿರುವ ವೃದ್ದಾಶ್ರಮಕ್ಕೆ ಸೇರಿಸುವ ಬಗ್ಗೆ ಚರ್ಚೆ ಮಾಡಿ ಅದರಂತೆ ಉಡುಪಿ ಜಿಲ್ಲೆಯ ಕೋಟೇಶ್ವರ ಗ್ರಾಮದ ಸರ್ಜನ್ ಆಸ್ಪತ್ರೆ ಹಾಗೂ ವೃದ್ದಾಶ್ರಮಕ್ಕೆ ದಾಖಲಿಸಿದ್ದಾರೆ.

ಪತಿಯ ಪಿಂಚಣಿ ಹಣದೊಂದಿಗೆ ಈಗಾಗಲೇ ಮಾರಿಕೊಂಡಿರುವ ಪಾಳು ಬಿದ್ದ ಮನೆಯಲ್ಲಿ ಪಾರ್ಶ್ವವಾಯು ರೋಗದೊಂದಿಗೆ ಕಳೆದ ಹಲವಾರು ವರ್ಷಗಳಿಂದ ಒಂಟಿಯಾಗಿ ನರಕಯಾತನೆ ಅನುಭವುಸುತಿದ್ದ ವೃದ್ದೆಯನ್ನು ವೈದ್ಯಕೀಯ ವ್ಯವಸ್ಥೆ ಇರುವಂತಹ ಕೋಟೇಶ್ವರದ ವೃದ್ದಾಶ್ರಮಕ್ಕೆ ಸೇರಿಸಿ ಖಾಕಿಯೊಳಗಿನ ಮಾನವೀಯತೆ ಅಡಿಯಲ್ಲಿ ಹಲವಾರು ಮಾನವೀಯ ಕಾರ್ಯವನ್ನು ಮಾಡುವ ಮೂಲಕ ಜನಮಾನಸದಲ್ಲಿ ಜನಾನುರಾಗಿ ಪೊಲೀಸ್ ಅಧಿಕಾರಿಯಾಗಿರುವ ಪಟ್ಟಣದ ಪಿಎಸ್‌ಐ ಪ್ರವೀಣ್ ಮಾನವೀಯತೆ ಮೆರೆದಿದ್ದಾರೆ.

ಪತ್ರಕರ್ತ ಮೈಸ್ ಪಿಯೂಸ್ ರೋಡ್ರಿಗಸ್ ವಿಶೇಷ ಕಾಳಜಿ ವಹಿಸಿ  ಸಾಗರದ ಆಂಬುಲೆನ್ಸ್ ಮಾಲೀಕ ಇಮ್ರಾನ್ ರವರ ಸಹಕಾರದಿಂದ ಕೋಟೇಶ್ವರದ ಸರ್ಜನ್ ಆಸ್ಪತ್ರೆ ಮತ್ತು ವೃದ್ದಾಶ್ರಮಕ್ಕೆ ದಾಖಲಿಸಿದ್ದಾರೆ.

ಈ ಸಂಧರ್ಭದಲ್ಲಿ ಪತ್ರಕರ್ತರಾದ ರಫ಼ಿ ರಿಪ್ಪನ್‌ಪೇಟೆ , ಸಬಾಸ್ಟಿಯನ್ ಮ್ಯಾಥ್ಯೂಸ್ , ಸಾಗರದ ಪತ್ರಕರ್ತ ರಫೀಕ್ ಬ್ಯಾರಿ ರಕ್ಷಣಾ ಇಲಾಖೆಯು ಉಮೇಶ್ , ಮಧುಸೂಧನ್ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

15 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

17 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago