ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು
ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಬೀಬುಲ್ಲಾನ ಬಲಗಾಲಿನ ಪಾದಕ್ಕೆ ಗುಂಡು ತಗುಲಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಜಯಪ್ಪ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…